Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:10 - ಕನ್ನಡ ಸಮಕಾಲಿಕ ಅನುವಾದ

10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:10
13 ತಿಳಿವುಗಳ ಹೋಲಿಕೆ  

ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು