Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:5 - ಕನ್ನಡ ಸಮಕಾಲಿಕ ಅನುವಾದ

5 ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:5
30 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.


ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.


“ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; ನಾನು ಅರಿಯದ ಜನರು ನನಗೆ ವಿಧೇಯರಾಗುವರು.


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”


ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.


“ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು