Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:6
45 ತಿಳಿವುಗಳ ಹೋಲಿಕೆ  

ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.


ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.


ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.


ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, ಸರ್ವಶಕ್ತರಿಗೆ ಬಿನ್ನಹ ಮಾಡು.


ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?


ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.


ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.


ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.


ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು.


ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು