Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:7 - ಕನ್ನಡ ಸಮಕಾಲಿಕ ಅನುವಾದ

7 ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:7
61 ತಿಳಿವುಗಳ ಹೋಲಿಕೆ  

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.


ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,


ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.


ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.


ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.


ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು