Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:11 - ಕನ್ನಡ ಸಮಕಾಲಿಕ ಅನುವಾದ

11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:11
36 ತಿಳಿವುಗಳ ಹೋಲಿಕೆ  

ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.


ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.


ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.


ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.


ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು