Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:2 - ಕನ್ನಡ ಸಮಕಾಲಿಕ ಅನುವಾದ

2 ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು ಸಬ್ಬತ್‍ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:2
31 ತಿಳಿವುಗಳ ಹೋಲಿಕೆ  

“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”


ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.


ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.


ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.


ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.


ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.


“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.


ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.


ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು


ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು, ಆಗ ಯುಗಯುಗಕ್ಕೂ ನಾಡಿನಲ್ಲಿ ವಾಸಮಾಡುವೆ.


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು?


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು