ಯೆಶಾಯ 57:1 - ಕನ್ನಡ ಸಮಕಾಲಿಕ ಅನುವಾದ1 ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೀತಿವಂತರು ಇಲ್ಲವಾಗುವರು; ಯಾರೂ ಅದನ್ನು ಗಮನಿಸರು. ಸದ್ಭಕ್ತರು ಗತಿಸಿಹೋಗುವರು; ಅದಕ್ಕೆ ಕಾರಣವೇನೆಂದು ಯಾರೂ ಗ್ರಹಿಸರು. ಕೇಡಿನಿಂದ ಪಾರಾಗಲೆಂದೇ ಸದ್ಭಕ್ತರಿಗೆ ಹೀಗಾಯಿತು ಎಂದು ಯಾರೂ ಯೋಚಿಸರು. ಅಧ್ಯಾಯವನ್ನು ನೋಡಿ |
“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.