ಯೆಶಾಯ 57:11 - ಕನ್ನಡ ಸಮಕಾಲಿಕ ಅನುವಾದ11 “ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಯಾರಿಗೆ ಬೆದರಿ ಹೆದರಿದ್ದರಿಂದ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ. ಅಧ್ಯಾಯವನ್ನು ನೋಡಿ |