Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:14 - ಕನ್ನಡ ಸಮಕಾಲಿಕ ಅನುವಾದ

14 ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಆಟಂಕವನ್ನು ಎತ್ತಿಹಾಕಿರಿ ಎಂದು ಒಂದು ವಾಣಿಯು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:14
14 ತಿಳಿವುಗಳ ಹೋಲಿಕೆ  

ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.


ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.


“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.


ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.


ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು