Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:5 - ಕನ್ನಡ ಸಮಕಾಲಿಕ ಅನುವಾದ

5 ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಏಲಾ ಮರಗಳ ತೋಪುಗಳಲ್ಲಿಯೂ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು ಹೊಳೆ ಕೊರೆದ ಡೊಂಗರಗಳಲ್ಲಿಯೂ ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ ಸುಳ್ಳಿನ ಸಂತತಿಯೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ಮಾಡಬೇಕೆನ್ನುವುದು, ಪ್ರತಿಯೊಂದು ಹಸಿರು ಮರದಡಿಯಲ್ಲಿ ಸುಳ್ಳುದೇವರ ಪೂಜೆ ಮಾಡುವದೊಂದನ್ನೇ, ಪ್ರತಿಯೊಂದು ನೀರಿನ ಬುಗ್ಗೆಗಳ ಬಳಿಯಲ್ಲಿ ನಿಮ್ಮ ಮಕ್ಕಳನ್ನು ಕೊಂದು ಬಂಡೆಕಲ್ಲಿನ ಮೇಲೆ ಅವರ ಯಜ್ಞಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:5
32 ತಿಳಿವುಗಳ ಹೋಲಿಕೆ  

“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.


ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.


ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು