ಯೆಶಾಯ 57:6 - ಕನ್ನಡ ಸಮಕಾಲಿಕ ಅನುವಾದ6 ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ. ಅಧ್ಯಾಯವನ್ನು ನೋಡಿ |
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.