Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:1 - ಕನ್ನಡ ಸಮಕಾಲಿಕ ಅನುವಾದ

1 “ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗಂಟಲೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ದನಿಗೈದು ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು, ಯಾಕೋಬವಂಶದವರಿಗೆ ಅವರ ಪಾಪಗಳನ್ನು ಅರುಹು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಷ್ಟು ಗಟ್ಟಿಯಾಗಿ ಆರ್ಭಟಿಸಬಹುದೋ ಅಷ್ಟು ಆರ್ಭಟಿಸಿರಿ, ನಿಲ್ಲಿಸಬೇಡಿರಿ. ತುತ್ತೂರಿಯಂತೆ ಗಟ್ಟಿಯಾಗಿ ಕಿರುಚಿರಿ. ಜನರು ಮಾಡಿದ ಪಾಪಗಳನ್ನು ಅವರಿಗೆ ತಿಳಿಸಿರಿ. ಯಾಕೋಬನ ವಂಶದವರಿಗೆ ಅವರ ಪಾಪಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:1
37 ತಿಳಿವುಗಳ ಹೋಲಿಕೆ  

ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


“ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.


“ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.


“ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.


ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.


ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


“ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,


ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು.


ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.


ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು