ಯೆಶಾಯ 58:10 - ಕನ್ನಡ ಸಮಕಾಲಿಕ ಅನುವಾದ10 ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ. ಅಧ್ಯಾಯವನ್ನು ನೋಡಿ |