ಯೆಶಾಯ 58:3 - ಕನ್ನಡ ಸಮಕಾಲಿಕ ಅನುವಾದ3 ‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವದೇಕೆ ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡಿಸಿ ನಿಮ್ಮ ಆಳುಗಳನ್ನು ದುಡಿತಕ್ಕೆಳೆಯುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿ |