Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:5 - ಕನ್ನಡ ಸಮಕಾಲಿಕ ಅನುವಾದ

5 ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವದಕ್ಕಾಗಿ ನಾನು ನೇವಿುಸಿದ ಉಪವಾಸದಿನವು ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀತಟ್ಟನ್ನೂ ಬೂದಿಯನ್ನೂ ಆಸನಮಾಡಿಕೊಳ್ಳುವದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:5
22 ತಿಳಿವುಗಳ ಹೋಲಿಕೆ  

“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”


ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.


“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.


‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.


ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.


ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.


ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.


ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.


“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದೇ ನಿಮಗೆ ಸಬ್ಬತ್ ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು