Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:8 - ಕನ್ನಡ ಸಮಕಾಲಿಕ ಅನುವಾದ

8 ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಭೇದಿಸಿಕೊಂಡು ಬರುವದು, ನಿಮ್ಮ ಕ್ಷೇಮವು ಬೇಗನೆ ವಿಕಸಿಸುವದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿ ಮುಂದರಿಯುವದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಹೀಗೆ ಮಾಡಿದ್ದಲ್ಲಿ ನೀವು ಬೆಳಕಿನಂತೆ ಪ್ರಕಾಶಿಸುವಿರಿ. ಆಗ ನಿಮ್ಮ ಗಾಯಗಳು ಗುಣವಾಗುವವು. ನಿಮ್ಮ ಒಳ್ಳೆಯತನವು ನಿಮ್ಮ ಮುಂದೆ ನಡೆಯುವುದು. ಯೆಹೋವನ ಮಹಿಮೆಯು ನಿಮ್ಮ ಹಿಂದಿನಿಂದ ನಿಮ್ಮನ್ನು ಹಿಂಬಾಲಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:8
27 ತಿಳಿವುಗಳ ಹೋಲಿಕೆ  

ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.


“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.


ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.


ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.


ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.


ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.


ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.


ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು