ಯೆಶಾಯ 59:11 - ಕನ್ನಡ ಸಮಕಾಲಿಕ ಅನುವಾದ11 ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ. ಅಧ್ಯಾಯವನ್ನು ನೋಡಿ |