Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:12 - ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:12
31 ತಿಳಿವುಗಳ ಹೋಲಿಕೆ  

ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


“ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.


“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.


ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.


ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು.


“ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ, ನನ್ನ ಪಾಪವು ಯಾವಾಗಲೂ ನನ್ನ ಕಣ್ಮುಂದೆಯೇ ಇದೆ.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು