Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:4 - ಕನ್ನಡ ಸಮಕಾಲಿಕ ಅನುವಾದ

4 ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 [ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:4
36 ತಿಳಿವುಗಳ ಹೋಲಿಕೆ  

ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.


ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.


“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.


ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.


ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.


ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ. ಏಕೆಂದರೆ, ವ್ಯರ್ಥವಾದವುಗಳಿಂದ ಅವನಿಗಾಗುವ ಪ್ರತಿಫಲವು ಶೂನ್ಯವೇ.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು,


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.


ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!


ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು. ಭೂಮಿಗೆ ನಮ್ಮಿಂದ ಯಾವ ಬಿಡುಗಡೆಯೂ ಆಗಲಿಲ್ಲ. ಭೂಲೋಕದ ಜನರಿಗೆ ಜನ್ಮ ಕೊಡಲಿಲ್ಲ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


ನೀವು ಒಣಹುಲ್ಲನ್ನು ಗರ್ಭಧರಿಸಿ, ಪೈರಿನ ಮೋಟನ್ನು ಹೆರುವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗುವುದು.


ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.


ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು.


ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.


ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು