Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:8 - ಕನ್ನಡ ಸಮಕಾಲಿಕ ಅನುವಾದ

8 ಸಮಾಧಾನದ ಮಾರ್ಗವನ್ನೇ ಅವರು ಅರಿಯರು. ಅವರ ದಾರಿಗಳಲ್ಲಿ ನ್ಯಾಯವಿಲ್ಲ. ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ. ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ವಕ್ರಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವ ಯಾವನೂ ಸಮಾಧಾನವನ್ನರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:8
20 ತಿಳಿವುಗಳ ಹೋಲಿಕೆ  

ಸಮಾಧಾನದ ಮಾರ್ಗವನ್ನೇ ಅವರು ಅರಿಯರು.”


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.


ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.


ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ.


ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ.


ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.


ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.


ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು