Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:2 - ಕನ್ನಡ ಸಮಕಾಲಿಕ ಅನುವಾದ

2 ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ಆ ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:2
34 ತಿಳಿವುಗಳ ಹೋಲಿಕೆ  

ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”


ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.


ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.


ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು.


ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.


ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು.


ಪ್ರತಿಯೊಂದಕ್ಕೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು.


ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ.


ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.


ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.


ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.


ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿರಬೇಕು.


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,


ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.


ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು.


ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು