ಯೆಶಾಯ 60:13 - ಕನ್ನಡ ಸಮಕಾಲಿಕ ಅನುವಾದ13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು. ಅಧ್ಯಾಯವನ್ನು ನೋಡಿ |