Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:14 - ಕನ್ನಡ ಸಮಕಾಲಿಕ ಅನುವಾದ

14 ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾವಿುಯ ಚೀಯೋನ್ ಎಂದು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:14
22 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


“ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.


ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು