Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:15 - ಕನ್ನಡ ಸಮಕಾಲಿಕ ಅನುವಾದ

15 ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:15
20 ತಿಳಿವುಗಳ ಹೋಲಿಕೆ  

ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.


ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.


ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು