Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:16 - ಕನ್ನಡ ಸಮಕಾಲಿಕ ಅನುವಾದ

16 ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:16
25 ತಿಳಿವುಗಳ ಹೋಲಿಕೆ  

ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.


ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಅದು ಸೇನಾಧೀಶ್ವರ ಯೆಹೋವ ದೇವರಿಗೆ ಈಜಿಪ್ಟ್ ದೇಶದಲ್ಲಿ ಗುರುತಾಗಿ ಸಾಕ್ಷಿಯಾಗಿರುವುದು. ಏಕೆಂದರೆ ಹಿಂಸಕರ ದೆಸೆಯಿಂದ ಯೆಹೋವ ದೇವರನ್ನು ಕೂಗಿಕೊಳ್ಳಲು, ದೇವರು ಅವರಿಗೆ ಒಬ್ಬ ಶೂರನಾದ ರಕ್ಷಕನನ್ನು ಕಳುಹಿಸಿ, ಅವರನ್ನು ಬಿಡುಗಡೆ ಮಾಡುವರು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”


ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.


ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ. ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.


ಆತನು ನಿಶ್ಚಯವಾಗಿ, “ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ!” ಎಂದು ಹೇಳಿದನು. ಆದ್ದರಿಂದ ಅವರಿಗೆ ರಕ್ಷಕನಾಗಿದ್ದನು.


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”


ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”


ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಅದು ನಾನೇ ಎಂದು ಅವರು ಗ್ರಹಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು