Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:18 - ಕನ್ನಡ ಸಮಕಾಲಿಕ ಅನುವಾದ

18 ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:18
23 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.


ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು. ಇತರ ಜನಾಂಗಗಳ ಆಸ್ತಿ ನಿನ್ನ ಬಳಿಗೆ ತರುತ್ತಿರುವರು. ಅವರ ಅರಸರು ಸಹ ಬಂಧುಗಳಾಗಿ ನಿನ್ನ ಮೆರವಣಿಗೆಯಲ್ಲಿ ಮುನ್ನಡೆಸಿದರು ಹಗಲುರಾತ್ರಿ ಅವು ಮುಚ್ಚಿರುವುದಿಲ್ಲ.


ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.


ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.


ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.


ಅವನು ನಾಲ್ಕು ಕಡೆಗಳಿಂದ ಅಳೆದನು. ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಸ್ಥಳವನ್ನೂ ಪ್ರತ್ಯೇಕಪಡಿಸುವ ಹಾಗೆ ಅದಕ್ಕೆ ಸುತ್ತಲು ಸುಮಾರು 265 ಮೀಟರ್ ಉದ್ದ ಮತ್ತು ಸುಮಾರು 265 ಮೀಟರ್ ಗೋಡೆ ಇತ್ತು.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು