ಯೆಶಾಯ 60:20 - ಕನ್ನಡ ಸಮಕಾಲಿಕ ಅನುವಾದ20 ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿನ್ನ ಸೂರ್ಯನು ಇನ್ನು ಮುಣುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು. ಅಧ್ಯಾಯವನ್ನು ನೋಡಿ |