ಯೆಶಾಯ 60:4 - ಕನ್ನಡ ಸಮಕಾಲಿಕ ಅನುವಾದ4 ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ. ಅಧ್ಯಾಯವನ್ನು ನೋಡಿ |