ಯೆಶಾಯ 61:1 - ಕನ್ನಡ ಸಮಕಾಲಿಕ ಅನುವಾದ1 ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.