ಯೆಶಾಯ 61:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ. ಅಧ್ಯಾಯವನ್ನು ನೋಡಿ |