ಯೆಶಾಯ 61:7 - ಕನ್ನಡ ಸಮಕಾಲಿಕ ಅನುವಾದ7 ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಗತಿಸಿದ ದಿವಸಗಳಲ್ಲಿ ಜನರು ನಿಮ್ಮನ್ನು ನಾಚಿಕೆಗೆ ಗುರಿಪಡಿಸಿದರು; ಕೆಟ್ಟಮಾತುಗಳನ್ನಾಡಿದರು; ಬೇರೆ ಜನರಿಗಿಂತ ನೀವು ಹೆಚ್ಚಾಗಿ ನಾಚಿಕೆಗೆ ಒಳಗಾದಿರಿ. ಅದಕ್ಕಾಗಿ ನಿಮ್ಮ ಭೂಮಿಯಲ್ಲಿ ಬೇರೆ ಸ್ಥಳಗಳಿಗಿಂತ ಎರಡರಷ್ಟು ಹೆಚ್ಚು ಕೊಯಿಲು ಮಾಡುವಿರಿ. ನೀವು ಶಾಶ್ವತವಾದ ಸಂತೋಷವನ್ನು ಪಡೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |