Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:8
34 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.


ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ.


“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.


ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


“ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.”


ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.


“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು