Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:1 - ಕನ್ನಡ ಸಮಕಾಲಿಕ ಅನುವಾದ

1 ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:1
30 ತಿಳಿವುಗಳ ಹೋಲಿಕೆ  

ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.


ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.


ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ.


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.


ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.


ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು