Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:10 - ಕನ್ನಡ ಸಮಕಾಲಿಕ ಅನುವಾದ

10 ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಎತ್ತರಿಸಿರಿ, ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಿಗೆ ಧ್ವಜವನ್ನೆತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದ್ವಾರಗಳೊಳಗಿಂದ ಬನ್ನಿರಿ. ಜನರು ಬರುವದಕ್ಕೆ ದಾರಿಯನ್ನು ಸರಿಮಾಡಿರಿ. ರಸ್ತೆಯನ್ನು ಸಿದ್ಧಪಡಿಸಿರಿ. ಅದರ ಮೇಲಿರುವ ಕಲ್ಲುಗಳನ್ನು ತೆಗೆದುಬಿಡಿರಿ. ಜನಾಂಗಗಳು ಕಾಣುವಂತೆ ಧ್ವಜವನ್ನು ಏರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:10
27 ತಿಳಿವುಗಳ ಹೋಲಿಕೆ  

ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,


“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.


“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.


ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು. ಇತರ ಜನಾಂಗಗಳ ಆಸ್ತಿ ನಿನ್ನ ಬಳಿಗೆ ತರುತ್ತಿರುವರು. ಅವರ ಅರಸರು ಸಹ ಬಂಧುಗಳಾಗಿ ನಿನ್ನ ಮೆರವಣಿಗೆಯಲ್ಲಿ ಮುನ್ನಡೆಸಿದರು ಹಗಲುರಾತ್ರಿ ಅವು ಮುಚ್ಚಿರುವುದಿಲ್ಲ.


ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.


ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.


ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.


ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು