Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:3
5 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು