Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:4 - ಕನ್ನಡ ಸಮಕಾಲಿಕ ಅನುವಾದ

4 ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:4
32 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


“ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.


ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷ ಪಡುವೆನು. ಅದರಲ್ಲಿ ಅಳುವ ಧ್ವನಿಯೂ, ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


“ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು.


ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.


“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


ಭೂಮಿಯು ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. ಅವು ಇಜ್ರೆಯೇಲಿಗೆ ಒಲಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು