Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:6 - ಕನ್ನಡ ಸಮಕಾಲಿಕ ಅನುವಾದ

6 ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:6
33 ತಿಳಿವುಗಳ ಹೋಲಿಕೆ  

ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.


ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.


ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.


ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.


ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು.


ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.


ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.


ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”


ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.


ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.


ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು