Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:10
48 ತಿಳಿವುಗಳ ಹೋಲಿಕೆ  

“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಆದ್ದರಿಂದ ಜನರು, “ನಾವು ಏನು ಕುಡಿಯೋಣ?” ಎಂದು ಹೇಳಿ, ಮೋಶೆಗೆ ವಿರೋಧವಾಗಿ ಗೊಣಗುಟ್ಟಿದರು.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.


ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.


ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.


ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.


ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ಆದರೆ ನೀವು ಮೇಲೆ ಹತ್ತಿ ಹೋಗುವುದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದಿರಿ.


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.


ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.


ಅವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತರ ಯೋಜನೆಯ ಬಗ್ಗೆ ಹೀನೈಯಿಸಿದ್ದರಿಂದ ಅವರಿಗೆ ಹಾಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು