Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋವನು ಬಹಳ ಕಾಲದ ಹಿಂದೆ ನಡೆದುದನ್ನು ಇನ್ನೂ ಜ್ಞಾಪಕದಲ್ಲಿಟ್ಟುಕೊಂಡಿದ್ದಾನೆ. ಆತನು ಮೋಶೆಯನ್ನೂ ಅವನ ಜನರನ್ನೂ ನೆನಪುಮಾಡಿಕೊಳ್ಳುತ್ತಾನೆ. ಆ ಜನರನ್ನು ಸಮುದ್ರದ ಮೂಲಕ ಬರಮಾಡಿದವನು ಯೆಹೋವನೇ. ಆತನು ತನ್ನ ಕುರಿಮಂದೆಯನ್ನು ನಡೆಸಲು ತನ್ನ ಕುರುಬರನ್ನು ಉಪಯೋಗಿಸಿದನು. ಆದರೆ ಈಗ ಯೆಹೋವನೆಲ್ಲಿ? ಮೋಶೆಯಲ್ಲಿ ತನ್ನ ಪವಿತ್ರಾತ್ಮನನ್ನು ಇಟ್ಟ ಯೆಹೋವನೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:11
34 ತಿಳಿವುಗಳ ಹೋಲಿಕೆ  

ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.


ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.


ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.


ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,


ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,


ಯೆಹೋವ ದೇವರು ಇಂತೆನ್ನುತ್ತಾರೆ: ಸಮುದ್ರದ ಮುಖಾಂತರವಾಗಿ ಮಾರ್ಗಮಾಡಿದವನೂ; ಬಲವಾದ ನೀರಿನಲ್ಲಿ ದಾರಿ ಮಾಡಿದವನೂ;


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.


ನಿಮ್ಮ ಮಹಾಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿಮ್ಮ ಕೃತ್ಯಗಳನ್ನು ಯೋಚಿಸುವೆನು.”


ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು