Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:14 - ಕನ್ನಡ ಸಮಕಾಲಿಕ ಅನುವಾದ

14 ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆತ್ಮವು ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಅವರನ್ನು ವಿಶ್ರಮಸ್ಥಾನಕ್ಕೆ ಕರತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವದಕ್ಕಾಗಿ ನಿನ್ನ ಜನರನ್ನು ಹೀಗೆ ನಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಆಶ್ಚರ್ಯಕರವನ್ನಾಗಿ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:14
17 ತಿಳಿವುಗಳ ಹೋಲಿಕೆ  

ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು.


ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.


ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.


ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ.


ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.


ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.


ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.


ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು