Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:16 - ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:16
29 ತಿಳಿವುಗಳ ಹೋಲಿಕೆ  

ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.


ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ಆಗ ನೀನು ಫರೋಹನಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲ ನನ್ನ ಮಗನು, ನನ್ನ ಜೇಷ್ಠಪುತ್ರನು.


ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು