Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:7
46 ತಿಳಿವುಗಳ ಹೋಲಿಕೆ  

ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.


ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು.


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಕುಂದದ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.


ಅವರು ತಮ್ಮ ರಾಜ್ಯದಲ್ಲಿಯೂ, ನೀವು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀವು ಅವರಿಗೆ ಕೊಟ್ಟ ವಿಸ್ತಾರವಾದ, ರಸವತ್ತಾದ ದೇಶದಲ್ಲಿಯೂ, ನಿಮ್ಮನ್ನು ಸೇವಿಸಲಿಲ್ಲ. ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.


ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.


ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.


ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.


ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.


ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.


ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?


ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು