ಯೆಶಾಯ 64:4 - ಕನ್ನಡ ಸಮಕಾಲಿಕ ಅನುವಾದ4 ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ. ಅಧ್ಯಾಯವನ್ನು ನೋಡಿ |