ಯೆಶಾಯ 65:14 - ಕನ್ನಡ ಸಮಕಾಲಿಕ ಅನುವಾದ14 ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ. ಅಧ್ಯಾಯವನ್ನು ನೋಡಿ |