Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:15 - ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:15
23 ತಿಳಿವುಗಳ ಹೋಲಿಕೆ  

ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.


ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,” ಎಂದು ದೇವರು ಹೇಳುತ್ತಾರೆ.


ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.


ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.


ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.


ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.


ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರೆಲ್ಲರು ನನಗೆ ವಿರೋಧವಾಗಿ ಶಪಿಸುತ್ತಾರೆ.


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು