Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜನರು ಅಲ್ಲೇ ಮನೆಮಾಡಿ ನಿವಾಸಮಾಡುವರು; ತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ತೋಟಗಳ ಫಲವನ್ನು ತಾವೇ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದ್ದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷಿತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:21
11 ತಿಳಿವುಗಳ ಹೋಲಿಕೆ  

ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.


ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.


ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು