Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:25 - ಕನ್ನಡ ಸಮಕಾಲಿಕ ಅನುವಾದ

25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:25
23 ತಿಳಿವುಗಳ ಹೋಲಿಕೆ  

ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.


ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.


“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು