Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:3 - ಕನ್ನಡ ಸಮಕಾಲಿಕ ಅನುವಾದ

3 ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:3
20 ತಿಳಿವುಗಳ ಹೋಲಿಕೆ  

“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


“ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.


ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು