ಯೆಶಾಯ 65:9 - ಕನ್ನಡ ಸಮಕಾಲಿಕ ಅನುವಾದ9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿ |