ಯೆಶಾಯ 66:11 - ಕನ್ನಡ ಸಮಕಾಲಿಕ ಅನುವಾದ11 ಆಕೆಯ ಸಾಂತ್ವನ ಸ್ತನವನ್ನು ಕುಡಿದು ನೀವು ತೃಪ್ತಿಯಾಗಿರುವಿರಿ. ನೀವು ಕುಡಿಯುವಿರಿ ಮತ್ತು ಅದರ ಸಮೃದ್ಧಿಯು ನಿಮ್ಮ ಸಂತೋಷಕ್ಕೆ ಕಾರಣವಾಗಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಕೆಯ ನಿವಿುತ್ತ ದುಃಖಿಸುವವರೇ, ನೀವೆಲ್ಲರೂ - ಆಕೆಯ ಸಮಾಧಾಯಕ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಕೆಂದರೆ ಆಕೆಯ ಎದೆಯಿಂದ ದೊರಕುವ ಹಾಲಿನಂತೆ ನಿಮಗೆ ಕರುಣೆಯು ದೊರಕುವದು. ಆ ಹಾಲು ನಿಮ್ಮನ್ನು ಪೂರ್ಣವಾಗಿ ತೃಪ್ತಿಗೊಳಿಸುವದು. ನೀವು ಆ ಹಾಲನ್ನು ಕುಡಿದು ಜೆರುಸಲೇಮಿನ ವೈಭವದಲ್ಲಿ ಆನಂದಿಸುವಿರಿ. ಅಧ್ಯಾಯವನ್ನು ನೋಡಿ |